ಬೆಳ್ತಂಗಡಿ:(ಜೂ.30) ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ ಜೂ. 28ರಂದು ನಡೆಯಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕಾಲೇಜಿನ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅಕ್ಷತಾ.ಕೆ ರವರು ಯುವ ಮನಸ್ಸುಗಳನ್ನು ಪೋಷಕರು ಮತ್ತು ಶಿಕ್ಷಕರು ಹೇಗೆ ಪೋಷಿಸಬೇಕು, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರದ ಬಗ್ಗೆ ವಿಸ್ತಾರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯ ಕುಮಾರ್ ರವರು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳು ಆಧುನಿಕ ಕಲಿಕೋಪಕರಣಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಸುಧಾರಿಸುವ ಜೊತೆಗೆ ಮೌಲ್ಯದ ಶಿಕ್ಷಣವನ್ನು ನೀಡುತ್ತಿದೆ ಎಂಬುದನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ. ಆರ್. ರವರು ವಿದ್ಯಾರ್ಥಿಗಳು ಪಾಲಿಸಬೇಕಾದ ಶಾಲಾ ನಿಯಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪೋಷಕರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.



