Mon. Jun 30th, 2025

Ujire: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಉಜಿರೆ :(ಜೂ.30) ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿ ಹರ್ಷಿತ್ ಇವರು ಉತ್ತರಾಖಂಡ ಹರಿದ್ವಾರದ ರಾಣಿಪುರದಲ್ಲಿ ಜೂ.28 ರಿಂದ ಜುಲೈ 1ರ ವರೆಗೆ ನಡೆಯಲಿರುವ ವಯೋಮಿತಿ 18 ವರ್ಷದ ಬಾಲಕರ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಇದನ್ನೂ ಓದಿ: 🟠ಉಜಿರೆ: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಪ್ರಶಿಕ್ಷಣ ಕಾರ್ಯಕ್ರಮ

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ , ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಎಚ್ ದೈಹಿಕ ಶಿಕ್ಷಣ ನಿರ್ದೇಶಕರು ಸಂದೇಶ ಪೂಂಜ, ಹಾಗೂ ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್ ಶುಭ ಹಾರೈಸಿದರು.

Leave a Reply

Your email address will not be published. Required fields are marked *