Tue. Jul 1st, 2025

Belagavi : ಮದುವೆಗೆ ಮನೆಯವರ ವಿರೋಧ – ಆಟೋದಲ್ಲಿಯೇ ನೇಣಿಗೆ ಶರಣಾದ ಜೋಡಿ

ಬೆಳಗಾವಿ :(ಜು.1) ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಟೋದಲ್ಲೇ ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ರಾಘವೇಂದ್ರ ಜಾಧವ್ (28) ಹಾಗೂ ರಂಜಿತಾ (26) ಎಂದು ತಿಳಿದುಬಂದಿದೆ.

ಇದನ್ನೂ ಓದಿ: 🔴ಧರ್ಮಸ್ಥಳ: ಶ್ರೀ ಧ.ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಪ್ರಿಯತಮ ತಾನು ಓಡಿಸುತ್ತಿದ್ದ ಆಟೋದಲ್ಲಿಯೇ ಪ್ರಿಯತಮೆಯ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಮನುವಳ್ಳಿ ಪಟ್ಟಣದ ರಾಘವೇಂದ್ರ ಮತ್ತು ರಂಜಿತಾ ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು ಎಂದು ತಿಳಿದುಬಂದಿದೆ.
ರಾಘವೇಂದ್ರ ಮತ್ತು ರಂಜಿತಾ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಇಬ್ಬರು ಪರಸ್ಪರವಾಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದು ಮದುವೆಗೆ ಮನೆಯಲ್ಲಿ ಒಪ್ಪದ ಹಿನ್ನೆಲೆ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 15 ದಿನಗಳ ಹಿಂದೆ ರಂಜಿತಾಗೆ ಬೇರೊಬ್ಬನ ಜೊತೆಗೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದು ಬಂದಿದೆ. ಹಾಗಾಗಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *