ಧರ್ಮಸ್ಥಳ(ಜು.1) ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ 2025 – 26 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು.

ಇದನ್ನೂ ಓದಿ: 🟣ಉಜಿರೆ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ
ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀಧ. ಮಂ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಜಯಶ್ರೀ ಜೈನ್ ಭಾಗವಹಿಸಿ ವಿದ್ಯಾರ್ಥಿ ಸರಕಾರದಲ್ಲಿ ನಾಯಕನಾಗಿ ಚುನಾಯಿತನಾದ ವಿದ್ಯಾರ್ಥಿಯು ಶಾಲೆಯಲ್ಲಿ ಹಲವಾರು ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಮುಂದೊಂದು ದಿನ ದೇಶದ ಉತ್ತಮ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿದೆ . ಉತ್ತಮ ರೀತಿಯಲ್ಲಿ ಶಾಲೆಯನ್ನು ಮುನ್ನಡೆಸಿಕೊಂಡು ಹೋಗಿ ಎಂದು ಶುಭ ಹಾರೈಸಿದರು.


ಶಾಲಾ ಮುಖ್ಯೋಪಾಧ್ಯಾರಾದ ಶ್ರೀ ಕಮಲ್ ತೇಜು ರಜಪೂತ್ ಇವರು ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನವನ್ನು ಬೋಧಿಸಿದರು.
ಶಿಕ್ಷಕಿ ಸೀಮಾ ಎಸ್ ಎಂ ಮಂತ್ರಿಗಳ ಜವಾಬ್ದಾರಿಯನ್ನು ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮಕ್ಕೆ ಶಿಕ್ಷಕ ಶೇಖರ್ ಇವರು ಸ್ವಾಗತಿಸಿ ಶಿಕ್ಷಕಿ ಪೂರ್ಣಿಮ ವಂದಿಸಿದರು. ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.
