Tue. Jul 1st, 2025

Ujire: ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

ಉಜಿರೆ:(ಜು.1) : ಶ್ರೀ. ಧ. ಮಂ.ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆಯನ್ನು ಆಚರಿಸಲಾಯಿತು. ಮಂಗಳೂರು ಪಿರೇರಿಯನ್ ಸರ್ವಿಸಸ್ ನ ಮ್ಯಾನೇಜರ್ ಹಾಗೂ ಕಾಲೇಜಿನ ಹಿರಿಯ ವಿಧ್ಯಾರ್ಥಿನಿ ಸಿ. ಎ. ಸುಕನ್ಯಾ ಕಾಮತ್ ಉದ್ಘಾಟನೆ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಇದನ್ನೂ ಓದಿ: ⭕ಬೆಳಗಾವಿ : ಮದುವೆಗೆ ಮನೆಯವರ ವಿರೋಧ

ಇವರು ಆಯ್ಕೆಯ ವಿಷಯದಲ್ಲಿ ಇತರ ವಿದ್ಯಾರ್ಥಿಗಳ ಆಯ್ಕೆಯನ್ನು ಸ್ವೀಕರಿಸುವುದಕ್ಕಿಂತ ತಮಗೆ ಸಮಂಜಸವಾದ ಆಯ್ಕೆಯನ್ನು ಸ್ವೀಕರಿಸಬೇಕು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಬೆಳೆಯಬೇಕು. ಇಂದು ವಾಣಿಜ್ಯ ವಿದ್ಯಾರ್ಥಿಗಳಿಗೆ ಹಲವಾರು ವ್ಯತ್ತಿ ಅವಕಾಶಗಳಿವೆ , ಆದರೆ ಕೌಶಲ್ಯಕ್ಕೆ ಮಹತ್ವ ನೀಡಿದರೆ ಮಾತ್ರ ಎಷ್ಟು ಎತ್ತರಕ್ಕೂ ಬೆಳೆಯಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಫ್ರೊಪೆಸರ್ ಪ್ರಮೋದ್ ಕುಮಾರ್ ವಹಿಸಿದ್ದರು.


ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥೆ ಬೇಬಿ ಎನ್. ಸಂಯೋಜಕಿ ಸವಿತ ಉಪನ್ಯಾಸಕಿಯರಾದ ಪ್ರಭಾವತಿ, ಶೋಭ ಹಾಗೂ ಅಶ್ವಿನಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅನಿಕ ತಂಡ ಪ್ರಾರ್ಥಿಸಿ ಸಂಘದ ಅಧ್ಯಕ್ಷ ಧರ್ಮತೇಜ ಸ್ವಾಗತಿಸಿ , ಕಾರ್ಯದರ್ಶಿ ಸಿರಿ ಧನ್ಯವಾದ ನೀಡಿದರು. ವಿದ್ಯಾರ್ಥಿನಿಯರಾದ ಹಂಸಿನಿ ಭಿಡೆ ಹಾಗೂ ಅಂಶುಲಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *