Mon. Jul 7th, 2025

Puttur: ಯುವಕ & ಯುವತಿಯ ಫೋಟೋ ,ವಿಡಿಯೋ ತೆಗೆದು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿ ಕಿರುಕುಳ

ಪುತ್ತೂರು:(ಜು.7) ಇಲ್ಲಿನ ಬಿರುಮಲೆ ಗುಡ್ಡದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: 🟢ಉಜಿರೆ : ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 54/2025, ಕಲಂ: 126(2), 352, 351(2), 353(1)(C), 57, 196(1)(a) ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಾಗಿದೆ.

ಆರೋಪಿತರುಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

ಸದ್ರಿ ಪ್ರಕರಣದ ಸಂತ್ರಸ್ಥರಿಬ್ಬರೂ ಅಪ್ರಾಪ್ತರಾಗಿರುವುದರಿಂದ, ಪ್ರಕರಣದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಯಾವುದೇ ಮಾಧ್ಯಮಗಳು ಪ್ರಸಾರ ಮಾಡುವಾಗ ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ ನ್ಯಾಯ ನಿಯಮಾವಳಿಗಳನ್ನು ಪಾಲಿಸಬೇಕಾಗಿ ಸೂಚಿಸಲಾಗಿರುತ್ತದೆ.

ದೂರಿನಲ್ಲೇನಿದೆ?
ಪ್ರಕರಣದ ಸಂತ್ರಸ್ಥ ಬಾಲಕನ ತಂದೆ ನೀಡಿದ ದೂರಿನಂತೆ, ಸದ್ರಿಯವರ ಅಪ್ರಾಪ್ತ ಪ್ರಾಯದ ಮಗನು, ಮೋಟಾರು ಸೈಕಲ್ ನಲ್ಲಿ ದಿನಾಂಕ: 05-07-2025 ರಂದು ಮಧ್ಯಾಹ್ನ ಸಮಯ, ಆತನ ಪರಿಚಯದ ಬಾಲಕಿಯೊಂದಿಗೆ ಪುತ್ತೂರು ಕಸ್ಬಾ ಗ್ರಾಮದ ಬೀರಮಲೆ ಬೆಟ್ಟ ಎಂಬಲ್ಲಿ ಕುಳಿತುಕೊಂಡಿದ್ದಾಗ, ಇಬ್ಬರು ಅಪರಿಚಿತ ವ್ಯಕ್ತಿಗಳು ಪಿರ್ಯಾದಿದಾರರ ಮಗನನ್ನು ಹಾಗೂ ಬಾಲಕಿಯನ್ನು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ನಿಮ್ಮ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಕೆ ಹಾಕಿರುವುದಲ್ಲದೆ, ಪಿರ್ಯಾದುದಾರರ ಮಗನನ್ನು ಅನ್ಯಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಇತರ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೋ ಮಾಡಿರುತ್ತಾರೆ. ಆನಂತರ ಸದ್ರಿ ಅಪರಿಚಿತ ವ್ಯಕ್ತಿಗಳು ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ವಾಟ್ಸಪ್ ಮತ್ತು ಇನ್ ಸ್ಟ್ರಾಗ್ರಾಮ್ ನಲ್ಲಿ ಹರಿಯಬಿಟ್ಟು, ಪಿರ್ಯಾದಿರವರ ಮಗನನ್ನು ಅನ್ಯಧರ್ಮದವನೆಂದು ಸದ್ರಿ ವೀಡಿಯೋದಲ್ಲಿ ಹೇಳಿರುತ್ತಾರೆ. ಸದ್ರಿ ಘಟನೆಯ ಮೂಲಕ ಕೋಮು ಸಾಮರಸ್ಯ ಕದಡಲು ಹಾಗೂ ಧರ್ಮಗಳ ನಡುವೆ ದ್ವೇಷ ಉಂಟಾಗಲು ಪ್ರಚೋದನೆ ಮಾಡಿದ ಸದ್ರಿ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 54/2025, ಕಲಂ: 126(2), 352, 351(2), 353(1)(C), 57, 196(1)(a) ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತರಾದ ಕುದ್ಮಾರು, ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು, ಪುತ್ತೂರು ನಿವಾಸಿ ರಾಮಚಂದ್ರ (38) ಎಂಬವರುಗಳನ್ನು ವಶಕ್ಕೆ ಪಡೆಯಲಾಗಿರುತ್ತದೆ.

Leave a Reply

Your email address will not be published. Required fields are marked *