ಬೆಳ್ತಂಗಡಿ (ಜು.9): ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ⭕ಸುಬ್ರಹ್ಮಣ್ಯ: ಗೃಹ ಸಚಿವ ಡಾ. ಜಿ. ಪರಮೇಶ್ವರ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ
ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ (30) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ.


ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆಯ ನಿವಾಸಿ, ದಿವಂಗತ ನೀಲಯ್ಯ ಗೌಡ ಅವರ ಪುತ್ರ ಸುರೇಶ್, ಕರ್ತವ್ಯಕ್ಕೆ ರಜೆ ತೆಗೆದುಕೊಂಡು ಮನೆಯಲ್ಲಿದ್ದರು.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.
