Wed. Jul 9th, 2025

Heart Attack: ಪಾಠ ಕೇಳುವಾಗಲೇ ಹೃದಯಾಘಾತದಿಂದ ಮೃತಪಟ್ಟ 4ನೇ ತರಗತಿ ವಿದ್ಯಾರ್ಥಿ

ಚಾಮರಾಜನಗರ (ಜು.9): ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಇದನ್ನೂ ಓದಿ: 🎂ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ಹುಟ್ಟು ಹಬ್ಬದ ಶುಭಾಶಯಗಳು

ಮನೋಜ್ ಕುಮಾರ್ (10) ಮೃತ ದುರ್ದೈವಿ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ​ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *