Wed. Jul 9th, 2025

Puttur: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್

ಪುತ್ತೂರು:(ಜು.9) ದಿನಾಂಕ 08.07.2025 ರಂದು ಬೆಳಿಗ್ಗೆ, ಪ್ರಕರಣದ ಅಪ್ರಾಪ್ತ ಪ್ರಾಯದ ಬಾಲಕಿಯು ತನ್ನ ತಾಯಿಯೊಂದಿಗೆ, ಪುತ್ತೂರು ನೆಹರೂ ನಗರ ಜಂಕ್ಷನ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು ಸಂತ್ರಸ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುತ್ತಾನೆ.

ಇದನ್ನೂ ಓದಿ: ⭕ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಈ ಬಗ್ಗೆ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ರ: 53/2025 : 126(2), 74, 115(2), 353(2) BNS 2023, 8 POCSO 2012 03 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ಆರೋಪಿ ಕಬಕ, ಪುತ್ತೂರು ನಿವಾಸಿ ನವೀನ್ ಚಂದ್ರ (49) ಎಂಬಾತನನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಸದ್ರಿ ಪ್ರಕರಣದ ಸಂತ್ರಸ್ತ ಬಾಲಕಿಯು ಅಪ್ರಾಪ್ತೆ ಯಾಗಿರುವುದರಿಂದ ಪ್ರಕರಣದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಯಾವುದೇ ಮಾಧ್ಯಮಗಳು ಪ್ರಸಾರ ಮಾಡುವಾಗ ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ ನ್ಯಾಯ ನಿಯಮಾವಳಿಗಳನ್ನು ಪಾಲಿಸಬೇಕಾಗಿ ಸೂಚಿಸಲಾಗಿರುತ್ತದೆ.

Leave a Reply

Your email address will not be published. Required fields are marked *