ಮುಂಡಾಜೆ:(ಜು.10) ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಾಂತ್ ಕುಮಾರ್, ಜೀವಶಾಸ್ತ್ರ ಉಪನ್ಯಾಸಕರು, ಸರಕಾರಿ ಪದವಿ ಪೂರ್ವ ಕಾಲೇಜು ಅಳದಂಗಡಿ ಇವರು ವಿದ್ಯಾರ್ಥಿಗಳನದ್ದೇಶಿಸಿ, ‘ಪ್ರತಿಯೊಬ್ಬರೂ ತಾವು ಮಾಡಬೇಕಾದ ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ’ ಎಂದರು.

ಮುಂಡಾಜೆ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿನಯಚಂದ್ರ ಇವರು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು.
ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಸ್ವಯಂ ಸೇವಕಿ ನಳಿನಿ ನಿರೂಪಿಸಿ, ಭವಿಷ್ಯ ಧನ್ಯವಾದವಿತ್ತರು.

