Sat. Jul 12th, 2025

Mangaluru: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕದ್ರಿ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್

ಮಂಗಳೂರು:(ಜು.11)ಕಾರು ಮತ್ತು ಸ್ಕೂಟರ್ ಮದ್ಯೆ ನಂತೂರು ಸರ್ಕಲ್‌ನಲ್ಲಿ ಆಕ್ಸಿಡೆಂಟ್ ಆಗಿದ್ದು, ಈ ಕುರಿತು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ, ಸಿಹೆಚ್‌ಸಿ 322 ರವರು ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ತಿಳಿಸಿದಂತೆ ಪಿರ್ಯಾದಿದಾರರು ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ನೀಡಿರುತ್ತಾರೆ.

    ಈ ಬಗ್ಗೆ ಪಿರ್ಯಾದಿದಾರರು ತನ್ನ ಬಾಬ್ತು ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಡಲು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ, ಸಿಹೆಚ್‌ಸಿ 322 ರವರು ರೂ 50,000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ನಂತರ ಪಿರ್ಯಾದಿದಾರರು ತನ್ನ ವಕೀಲರಲ್ಲಿ ವಿಷಯವನ್ನು ತಿಳಿಸಿ ವಕೀಲರು ಠಾಣೆಗೆ ಭೇಟಿ ನೀಡಿ ಪಿರ್ಯಾದಿದಾರರ ಬಾಬ್ತು ಕಾರನ್ನು ಬಿಟ್ಟುಕೊಡುವಂತೆ ಕೇಳಿಕೊಂಡಾಗ ಪಿರ್ಯಾದಿದಾರರು ಕಾರನ್ನು ಸ್ವೀಕರಿಸಿರುತ್ತಾರೆ ಎಂದು ಸಹಿ ಪಡೆದುಕೊಂಡು ಕಾರನ್ನು ಪೊಲೀಸ್ ಠಾಣೆಯಿಂದ ಬಿಟ್ಟುಕೊಟ್ಟಿರುವುದಿಲ್ಲ. ನಂತರ ತಸ್ಲಿಂ ಸಿಹೆಚ್‌ಸಿ 322 ರವರು ಕಾರನ್ನು ಪಿರ್ಯಾದಿದಾರರಿಗೆ ಬಿಟ್ಟುಕೊಡಲು ಪಿರ್ಯಾದಿದಾರರ ಮೊಬೈಲ್ ಅನ್ನು ಬಲವಂತದಿಂದ  ಪಡೆದುಕೊಂಡು ಕಾರನ್ನು ಬಿಟ್ಟು ಕಳುಹಿಸಿರುತ್ತಾರೆ. 

    ನಂತರ ಪಿರ್ಯಾದಿದಾರರು ತನ್ನ ಮೊಬೈಲ್ ಪೋನ್ ಅನ್ನು ತನಗೆ ವಾಪಾಸ್ಸು ಕೊಡಲು ತಸ್ಲಿಂ ಸಿಹೆಚ್‌ಸಿ 322 ರವರಲ್ಲಿ ಕೇಳಿಕೊಂಡಾಗ ರೂ 50,000/- ಲಂಚದ ಹಣಕ್ಕೆ ಬೇಡಿಕೆ ಇಟ್ಟು ಮೊಬೈಲ್ ಪೋನ್ ಅನ್ನು ಹಿಂತಿರುಗಿಸಬೇಕಾದರೆ ಓರಿಜಿನಲ್ ಲೈಸನ್ಸ್ ಅನ್ನು ಠಾಣೆಗೆ ತಂದುಕೊಡುವಂತೆ  ತಿಳಿಸಿರುತ್ತಾರೆ. ನಂತರ ಪಿರ್ಯಾದಿದಾರರು ಓರಿಜಿನಲ್ ಲೈಸನ್ಸ್ ಅನ್ನು ನೀಡಿರುತ್ತಾರೆ. 

   ತಸ್ಲಿಂ ಸಿಹೆಚ್‌ಸಿ 322 ರವರು ಠಾಣೆಯ ಮತ್ತೋರ್ವ ಸಿಬ್ಬಂದಿ ವಿನೋದ್ ಸಿಹೆಚ್‌ಸಿ 451 ರವರ ಮುಖಾಂತರ ರೂ 30,000/- ಲಂಚದ ಹಣ ಕೊಟ್ಟು ಓರಿಜಿನಲ್ ಲೈಸನ್ಸ್ ಪಡೆದುಕೊಂಡು ಹೋಗಲು ತಿಳಿಸಿದ್ದು, ಪಿರ್ಯಾದಿದಾರರು ಜುಲೈ 9 2025 ರಂದು ಕದ್ರಿ ಟ್ರಾಪಿಕ್ ಪೊಲೀಸ್ ಠಾಣೆಗೆ ಹೋಗಿ ತಸ್ಲಿಂ ಸಿಹೆಚ್‌ಸಿ 322 ರವರನ್ನು ಭೇಟಿ ಮಾಡಿ ಮಾತನಾಡಿದಾಗ ಓರಿಜಿನಲ್ ಲೈಸನ್ಸ್ ನೀಡಲು ತಸ್ಲಿಂ ರವರು ರೂ 10,000/- ಹಣವನ್ನು ನೀಡುವಂತೆ ತಿಳಿಸಿರುತ್ತಾರೆ. ಈ ಬಗ್ಗೆ ಪಿರ್ಯಾದಿದಾರರು ತನ್ನಲ್ಲಿ ರೂ 500 ಇದೆ ಎಂದಾಗ ರೂ 5000 ಇಲ್ಲದೇ ಠಾಣೆ ಕಡೆಗೆ ಬರಬೇಡ ಎಂದು ಬೈದು ಕಳುಹಿಸಿರುತ್ತಾರೆ. ಪಿರ್ಯಾದಿದಾರರು ಕಡಿಮೆ ಮಾಡಿ ಎಂದಾಗ ಓರಿಜಿನಲ್ ಲೈಸನ್ಸ್ ನೀಡಲು ರೂ 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಪಿರ್ಯಾದಿದಾರರಿಗೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕದ್ರಿ ಟ್ರಾಪಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ಸಿಹೆಚ್‌ಸಿ 322 ರವರ ಮತ್ತು ವಿನೋದ್ ಸಿಹೆಚ್‌ಸಿ 451 ರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ. 

ಈ ದಿನ ದಿನಾಂಕ 10.07.2025 ರಂದು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ಸಿಹೆಚ್‌ಸಿ 322 ರವರು ಪಿರ್ಯಾದುದಾರರಿಂದ ರೂ. 5000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದರಿ ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ ರವರು ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

Leave a Reply

Your email address will not be published. Required fields are marked *