ಹರಿಯಾಣ:(ಜು.11) ಹರಿಯಾಣದ ಗುರುಗ್ರಾಮದಲ್ಲಿ ರಾಜ್ಯ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಸ್ವತಃ ಅವರ ತಂದೆಯೇ ಗುಂಡಿಕ್ಕಿ ಕೊಂದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಗುರುಗ್ರಾಮದ ಸುಶಾಂತ್ ಲೋಕ್ -2 ರಲ್ಲಿರುವ ನಿವಾಸದಲ್ಲಿ ಮಧ್ಯಾಹ್ನ 12:30 ರ ಸುಮಾರಿಗೆ ಈ ಘಟನೆ ಜರುಗಿದೆ. ಘಟನೆ ನಡೆದ ಬಳಿಕ ಗುಂಡಿನ ದಾಳಿಗೆ ತುತ್ತಾಗಿದ್ದ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪ್ರಸ್ತುತ ಪೊಲೀಸರು ಮೃತ ಟೆನಿಸ್ ಆಟಗಾರ್ತಿಯ ತಂದೆಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: 🌱ಬೆಳ್ತಂಗಡಿ: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ
ರೀಲ್ಸ್ ವಿಚಾರಕ್ಕೆ ಕೊಲೆ
ಮೃತ ರಾಧಿಕಾ ಮತ್ತು ಅವರ ತಂದೆ ಒಂದೇ ಮನೆಯಲ್ಲಿ ಬಹಳ ವರ್ಷಗಳಿಂದ ವಾಸಿಸುತ್ತಿದ್ದರು. ಆದರೆ ಇಬ್ಬರ ನಡುವೆ ರೀಲ್ಸ್ ವಿಚಾರಕ್ಕೆ ಜಗಳ ನಡೆದಿದ್ದು, ಕ್ರಮೇಣ ಈ ಜಗಳ ತಾರಕಕ್ಕೇರಿದೆ. ಈ ವೇಳೆ ಮೃತ ಯುವತಿಯ ತಂದೆ, ಯುವತಿಗೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಆ ನಂತರ ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ರಾಧಿಕಾ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಆದಾಗ್ಯೂ, ಘಟನೆಯ ಹಿಂದಿನ ನಿಜವಾದ ಕಾರಣ ಇನ್ನೂ ಬೆಳಕಿಗೆ ಬಂದಿಲ್ಲ. ಮಗಳನ್ನು ಗುಂಡಿಕ್ಕಿ ಕೊಂದಿರುವ ರಾಧಿಕಾ ಅವರ ತಂದೆಯನ್ನು ಪೊಲೀಸರು ಬಂಧಿಸಿದ್ದು, ಸ್ಥಳದಿಂದ ರಿವಾಲ್ವರ್ ಅನ್ನು ವಶಪಡಿಸಿಕೊಂಡಿದ್ದಾರೆ.


ವಾಸ್ತವವಾಗಿ ರಾಧಿಕಾ ರಾಜ್ಯ ಮಟ್ಟದ ಟೆನಿಸ್ ಆಟಗಾರ್ತಿಯಾಗಿದ್ದು, ಹಲವು ಪಂದ್ಯಾವಳಿಗಳನ್ನು ಗೆದ್ದಿದ್ದರು. ಮೂಲಗಳ ಪ್ರಕಾರ, ರಾಧಿಕಾ ಮತ್ತು ಅವರ ತಂದೆಯ ನಡುವೆ ರೀಲ್ ಮಾಡುವ ಬಗ್ಗೆ ವಾಗ್ವಾದ ನಡೆದಿತ್ತು. ಈ ವಾಗ್ವಾದ ತಾರಕಕ್ಕೇರಿದ್ದು, ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ವೇಳೆ ತಾಳ್ಮೆ ಕಳೆದುಕೊಂಡ ರಾಧಿಕಾ ಅವರ ತಂದೆ, ತಮ್ಮ ಮಗಳ ಮೇಲೆ ಮೂರು ಗುಂಡುಗಳನ್ನು ಹಾರಿಸಿದ್ದಾರೆ.

