ಬೆಳಾಲು :(ಜು.12) ಅನುಮಾನಾಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಶವ ಮನೆಯ ಕೆರೆಯಲ್ಲಿ ಪತ್ತೆಯಾಗಿದ್ದು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್- ಭಾರತಿ ದಂಪತಿಯ ಎರಡನೇ ಪುತ್ರಿ ವೀಣಾ(19) ಮೃತ ಯುವತಿ.
ವೀಣಾರವರು ನಾಪತ್ತೆಯಾಗಿದ್ದಾರೆಂಬ ದೂರಿನ ಹಿನ್ನಲೆ ಪೋಲಿಸರು ಪ್ರಕಟಣೆ ಹೊರಡಿಸಿದ್ದರು.
ಜುಲೈ.11 ರಂದು ಶವ ಮನೆಯ ಕೆರೆಯಲ್ಲಿ ಪತ್ತೆಯಾಗಿದೆ.


ಬಳಿಕ ರಾತ್ರಿ ಅಗ್ನಿಶಾಮಕ ಮತ್ತು ಶೌರ್ಯ ವಿಪತ್ತು ತಂಡದವರು ಸೇರಿ ಮೃತದೇಹ ಹೊರತೆಗೆದಿದ್ದಾರೆ ಎಂದು ತಂದೆ ನಾಗೇಶ್ ಮಾಹಿತಿ ನೀಡಿದ್ದಾರೆ . ವೀಣಾ ಮೃತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶವಪರೀಕ್ಷೆಗಾಗಿ ಸಾಗಿಸಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

