ಕೊಯ್ಯೂರು :(ಜು.13) ವಿವಾಹಿತೆ ಮಹಿಳೆ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಮತ್ತು ರಾಧ ದಂಪತಿಯ ಎರಡನೇ ಪುತ್ರಿ ರಮ್ಯಾ(32) ಮನೆಯ ಕೋಣೆಯಲ್ಲಿ ಜುಲೈ 12 ರಂದು ಮಧ್ಯಾಹ್ನ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ಗೆ ಮದುವೆ ಮಾಡಿಕೊಡಲಾಗಿತ್ತು. ರಮ್ಯಾ ಬೆಳ್ತಂಗಡಿ ಮುಗುಳಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.



