ಉಜಿರೆ :(ಜು.16) ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ಪ್ರಥಮ ಚಿಕಿತ್ಸೆ, ಆರೋಗ್ಯ ಕಾಳಜಿ ಮತ್ತು ನೈರ್ಮಲ್ಯ’ ಎಂಬ ವಿಷಯದ ಬಗ್ಗೆ ದಿನಾಂಕ 16/07/2025 ರಂದು ಮಾಹಿತಿ ಕಾರ್ಯಾಗಾರ ನಡೆಯಿತು.

ಇದನ್ನೂ ಓದಿ: ⭕ಚೆನ್ನೈ: ನೆಗಡಿ ಎಂದು 8 ತಿಂಗಳ ಮಗುವಿಗೆ ವಿಕ್ಸ್, ಕರ್ಪೂರ ಹಚ್ಚಿದ ಪೋಷಕರು
ಸ್ಥಳೀಯ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ ಮತ್ತು ಶ್ರೀಮತಿ ಸುಮಂಜಲ ಇವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಮಳೆಗಾಲದಲ್ಲಿ ಹೇಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಮತ್ತು ತಮ್ಮ ವೈಯಕ್ತಿಕ ಸ್ವಚ್ಛತೆಗೆ ಬಹಳಷ್ಟು ಜಾಗ್ರತೆ ವಹಿಸಬೇಕು ಎಂಬುದನ್ನು ಕೆಲವು ಚಟುವಟಿಕೆಗಳ ಮೂಲಕ ತಿಳಿಸಿಕೊಟ್ಟರು.

ಮಳೆಗಾಲದಲ್ಲಿ ಕಂಡು ಬರುವ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಸಿ ಕೊಟ್ಟರು. ಸಿಸ್ಟರ್ ಸಿರಿಷಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿಯರಾದ ಜೆಸಿಂತಾ ಹಾಗೂ ನಳಿನಿ ಸಹಕರಿಸಿದರು.


