Fri. Jul 18th, 2025

ಮುಂಡಾಜೆ: ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಮುಂಡಾಜೆ:(ಜು.18) ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ ‘ಆಟಿಡೊಂಜಿ ದಿನ’ವನ್ನು ನಡೆಸಲಾಯಿತು.

ಇದನ್ನೂ ಓದಿ: 🟠ಉಜಿರೆ: “ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ” ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮ

ಕಾರ್ಯಕ್ರಮವನ್ನು ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಖ್ಯಾತ ತುಳುರಂಗಭೂಮಿ ಕಲಾವಿದ ವಿ ಎಸ್ ಶಶಿಧರ್ ದೇವಾಡಿಗ ನೆಲ್ಲಿಕಾರು ಅವರು ಆಗಮಿಸಿ ಆಟಿ ತಿಂಗಳ ವೈಜ್ಞಾನಿಕ ಹಿನ್ನಲೆ, ಮಹತ್ವ, ಹಾಗೂ ಸಂಪ್ರದಾಯಗಳ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಗೀತಾ ಮಾತನಾಡಿ ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ನೆನಪುಗಳನ್ನು ಹಂಚಿಕೊಂಡರು.


ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿ, ಸಾಂಸ್ಕೃತಿಕ ಸಂಘದ ಮುಖ್ಯಸ್ಥರಾದ ಪದ್ಮನಾಭ ಬಿ ಕೆ ಸ್ವಾಗತಿಸಿ, ಇಂಗ್ಲಿಷ್ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ವಂದಿಸಿದರು.


ತುಳುನಾಡಿನ ಸಂಸ್ಕೃತಿ ಪರಂಪರೆಗಳನ್ನು ಬಿಂಬಿಸುವ ತುಳು ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ಆಟಿ ತಿಂಗಳ ತಿನಿಸುಗಳ ಪ್ರದರ್ಶನ ಹಾಗೂ ಆಟಿಯ ಭೋಜನವು ಕಾರ್ಯಕ್ರಮದ ವಿಶೇಷವಾಗಿತ್ತು.

Leave a Reply

Your email address will not be published. Required fields are marked *