ಪುತ್ತೂರು:(ಜು.18) ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: ⭕ತೆಕ್ಕಾರು: ಪತ್ನಿಯನ್ನು ಇರಿದು ಕೊಂದ ಪತಿ
ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಶ್ರೀಕೃಷ್ಣ ಜೆ.ರಾವ್ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ಜು.18ರಂದು ನಡೆಯಲಿದೆ. ಶ್ರೀಕೃಷ್ಣ ಜೆ.ರಾವ್ ಎಂಬಾತನನ್ನು ಮಹಿಳಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಶ್ರೀಕೃಷ್ಣ ಜೆ.ರಾವ್ ಜಾಮೀನಿನಲ್ಲಿ ಬಿಡುಗಡೆ ಕೋರಿ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು ಅರ್ಜಿಯ ವಿಚಾರಣೆ ಜು.18ರಂದು ನಡೆಯಲಿದೆ. ಆರೋಪಿ ಪರ ವಕೀಲರಾದ ರಾಘವ ಪಿ.ಹಾಗೂ ಸುರೇಶ್ ರೈ ಪಡ್ಡಂಬೈಲು ವಾದ ಮಂಡಿಸಲಿದ್ದಾರೆ.



