Fri. Jul 18th, 2025

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳು ಮಾಹಿತಿ ಕಾರ್ಯಗಾರ

ಉಜಿರೆ: (ಜು. 18) ಜೂನ್ 26 ಮಾದಕ ವಸ್ತು ವಿರೋಧಿ ದಿನದ ಪ್ರಯುಕ್ತ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳು ಹಾಗೂ ಅದರ ದುಷ್ಪರಿಣಾಮಗಳು ಎಂಬ ವಿಷಯದ ಬಗ್ಗೆ ದಿನಾಂಕ 18-7-2025 ರಂದು ಅನುಗ್ರಹ ಶಾಲಾ ಸಭಾಂಗಣದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಇದನ್ನೂ ಓದಿ: 🔴ಉಜಿರೆ: ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ 2025-26 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ವಂ.ಫಾ ವಿಜಯ್ ಲೋಬೊ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಾದಕ ವಸ್ತುಗಳು ಹವ್ಯಾಸವಾಗಿ ಹೇಗೆ ಚಟವಾಗಿ ಮಾರ್ಪಾಡುತ್ತಿದೆ ಎಂಬುದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಶ್ರೀ ವಿಜಯಕುಮಾರ್ ರೈ ಕಾನ್ಸ್ಟೇಬಲ್ ವೃತ್ತಕಚೇರಿ ಬೆಳ್ತಂಗಡಿ ಇವರು, ಮಾದಕ ವಸ್ತುಗಳು ಎಂದರೇನು? ಅಪ್ರಾಪ್ತ ವಯಸ್ಕರು ಹೇಗೆ ಇದಕ್ಕೆ ಬಲಿಯಾಗುತ್ತಿದ್ದಾರೆ? ಹಾಗೂ ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಶ್ರೀ ಪ್ರಶಾಂತ್ ಹಾಗೂ ಶ್ರೀ ಸಂತೋಷ್ ಇವರು ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಶ್ರೀ ಗಣೇಶ್ ಇವರು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದಗಳನ್ನು ಅರ್ಪಿಸಿದರು.

Leave a Reply

Your email address will not be published. Required fields are marked *