ಪುತ್ತೂರು:(ಜು.20) ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: ⭕Raichur: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ತಾತಪ್ಪನಿಗೆ ಸಂಕಷ್ಟ..!
ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಶ್ರೀಕೃಷ್ಣ ಜೆ.ರಾವ್ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಶ್ರೀಕೃಷ್ಣ ಜೆ.ರಾವ್ ಎಂಬಾತನನ್ನು ಮಹಿಳಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಪ್ರಕರಣದಲ್ಲಿ ಬಂಧಿತನಾಗಿರುವ ಶ್ರೀಕೃಷ್ಣ ಜೆ. ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಭಯ ಪಕ್ಷಗಳ ವಾದ-ವಿವಾದವನ್ನು ಆಲಿಸಿ, ತನ್ನ ಅಂತಿಮ ತೀರ್ಪನ್ನು ಜುಲೈ 25ಕ್ಕೆ ಕಾಯ್ದಿರಿಸಿದೆ. ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.


ಶನಿವಾರ (ಜು. 19) ಪ್ರಕರಣವು ವಿಚಾರಣೆಗೆ ಬಂದಾಗ, ಅರ್ಜಿದಾರರ ಪರ ವಕೀಲರು ಹಾಗೂ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರು (ಪಿ.ಪಿ) ಹಾಜರಾಗಿ ವಾದ ಮಂಡಿಸಿದರು. ಈ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಹಾಗೂ ಸರ್ಕಾರಿ ಅಭಿಯೋಜಕರು ತಲಾ ಮೂರು ಪ್ರಮುಖ ಕಾನೂನು ಉಲ್ಲೇಖಗಳೊಂದಿಗೆ ತಮ್ಮ ಲಿಖಿತ ವಾದಾಂಶಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.ಸುದೀರ್ಘ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ, ಪ್ರಕರಣದ ಮುಂದಿನ ವಿಚಾರಣೆಯನ್ನು ಅಂತಿಮ ಆದೇಶಕ್ಕಾಗಿ” ನಿಗದಿಪಡಿಸಿತು. ಅದರಂತೆ, ಪ್ರಕರಣದ ಅಂತಿಮ ಆದೇಶವು ಜುಲೈ 25ರಂದು ಹೊರಬೀಳುವ ನಿರೀಕ್ಷೆಯಿದೆ. ಆರೋಪಿಯು ಜು 4 ರಂದು ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದ. ಆ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದಾನೆ.

