Sun. Jul 20th, 2025

ಬಂಟ್ವಾಳ: ತೆಂಕುತಿಟ್ಟು ಯಕ್ಷಗಾನದ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

ಬಂಟ್ವಾಳ:(ಜು.20) ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಮಂಚಕಲ್ಲು ನಿವಾಸಿ, ಹನುಮಗಿರಿ ಮೇಳದ ಹಿರಿ ಕಲಾವಿದ, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ರವಿವಾರ (ಜು.20) ಮಧ್ಯಾಹ್ನ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇದನ್ನೂ ಓದಿ: ⭕ಒಂದೇ ವಧುವನ್ನು ವರಿಸಿದ ಸಹೋದರರು

ಇತ್ತೀಚಿನವರೆಗೆ ಹನುಮಗಿರಿ ಮೇಳದಲ್ಲಿ ಬಣ್ಣದ ವೇಷಧಾರಿಯಾಗಿದ್ದ ಸದಾಶಿವ ಶೆಟ್ಟಿಗಾರ್ ಅವರು ತನ್ನ ಮೂರು ದಶಕಗಳಿಗೂ ಹೆಚ್ಚಿನ ಕಾಲ ತಿರುಗಾಟ ಮಾಡಿದವರು.
ಯಕ್ಷಗಾನ ಗುರುಗಳಾದ ರೆಂಜಾಳ ರಾಮಕೃಷ್ಣ ರಾವ್, ಬಣ್ಣದ ಮಹಾಲಿಂಗ ಅವರಿಂದ ನಾಟ್ಯಾಭ್ಯಾಸ ಕಲಿತು ಸುಮಾರು 36 ವರ್ಷಗಳ ಕಟೀಲು, ಧರ್ಮಸ್ಥಳ, ಹೊಸನಗರ, ಎಡನೀರು, ಹನುಮಗಿರಿ ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಕಳೆದ ಕೆಲವು ತಿಂಗಳ ಹಿಂದಷ್ಟೇ ಹನುಮಗಿರಿ ಮೇಳದಲ್ಲಿ ತಿರುಗಾಟ ಮುಗಿಸಿದ ಅವರು ನಿವೃತ್ತಿಯನ್ನೂ ಘೋಷಣೆ ಮಾಡಿದ್ದರು.

ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹತ್ತು ದಿನಗಳ ಹಿಂದಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ವತಿಯಿಂದ ಯಕ್ಷಮಂಗಳ ಪ್ರಶಸ್ತಿ ಸ್ವೀಕರಿಸಿದ್ದರು. ಪೇಜಾವರ ಶ್ರೀಗಳ ಜನುಮದಿನದ ಶ್ರೀರಾಮ ವಿಠಲ ಪ್ರಶಸ್ತಿ, ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ, ಕೀಲಾರು ಗೋಪಾಲಕೃಷ್ಣಯ್ಯ ಪ್ರಶಸ್ತಿ, ಅರಸಂಕಲ ಮೊದಲಾದ ಪ್ರಶಸ್ತಿಗಳನ್ನು ಪಡೆದಿದ್ದರು.

Leave a Reply

Your email address will not be published. Required fields are marked *