Mon. Jul 21st, 2025

ಬಂಟ್ವಾಳ : ನೇಣುಬಿಗಿದುಕೊಂಡು ಗ್ರಾಮಾಂತರ ಠಾಣಾ ಪಿ.ಎಸ್.ಐ ಆತ್ಮಹತ್ಯೆ

ಬಂಟ್ವಾಳ :(ಜು.21) ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ತನಿಖಾ ಪಿ.ಎಸ್.ಐ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ವೀರಪ್ಪ (55) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಅವರು ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ದಿನಾಂಕ 20.07.2025 ರಂದು ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಆ ಬಳಿಕ ಬಂಟ್ವಾಳದಲ್ಲಿ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಮೃತರು ಉತ್ತರ ಕನ್ನಡದ ಕಾರವಾರ ಮೂಲದವರಾಗಿದ್ದು, ದಿನಾಂಕ 19.07.2025 ರಂದು ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿದ್ದು, ಬೆಳಗ್ಗೆ ಕರ್ತವ್ಯಕ್ಕಾಗಿ ಠಾಣೆಯಿಂದ ದೂರವಾಣಿ ಕರೆ ಮಾಡಿದಾಗ ಸ್ಪಂದಿಸದ ಹಿನ್ನೆಲೆಯಲ್ಲಿ, ಠಾಣಾ ಸಿಬ್ಬಂದಿಗಳು ಮನೆಗೆ ತೆರಳಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *