Mon. Jul 21st, 2025

ಬಂದಾರು: ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ

ಬಂದಾರು:(ಜು.21) ಬಂದಾರು ಗ್ರಾಮ ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇದರ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಜುಲೈ 21 ನಡೆಯಿತು.

ಇದನ್ನೂ ಓದಿ: 🟣ಮಂಗಳೂರು: ಕಡಿಮೆ ವೆಚ್ಚ,ಪರಿಸರ ಸ್ನೇಹಿ ಸೋಲಾರ್ ನಿಮ್ಮ ಮನೆಗೂ ಬೇಕಾ

ಕೊಠಡಿಯ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಇವರು ನೆರವೇರಿಸಿದರು. ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಮಾತನಾಡುತ್ತಾ ಅವರು ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವುದರ ಮೂಲಕ ಶಾಲೆಯನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ. ಉತ್ತಮ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ದೊರೆಯುತ್ತಿದ್ದು, ಶಾಲೆಗಳನ್ನು ಉಳಿಸಿಕೊಳ್ಳುವತ್ತ ಊರಿನವರು ಗಮನ ಹರಿಸಬೇಕಾಗಿದೆ ಎಂದರು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಪಂಚಾಯತ್ ಸದಸ್ಯರಾದ ಅನಿತ. ಕೆ, ಕುರುಡಂಗೆ,ಭಾರತಿ ಕೋಡಿಯೆಲ್ , ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಾಬಲ ಗೌಡ,ಕೃಷ್ಣಯ್ಯ ಆಚಾರ್ಯ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಹೊನ್ನಪ್ಪ ಗೌಡ, ಡೀಕಯ್ಯ ಗೌಡ,ಪೆರ್ಲ- ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ದಾಮೋದರ ಗೌಡ ಕಾಡoಡ,ಪದಾಧಿಕಾರಿಗಳು- ಸದಸ್ಯರು,ಶಾಲಾ ಶಿಕ್ಷಕರು, ಪೋಷಕರು ಹಾಗೂ ಊರಿನ ನಾಗರಿಕರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *