Wed. Jul 23rd, 2025

Belthangady: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

ಬೆಳ್ತಂಗಡಿ: (ಜು.23) ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ ಸಮಿತಿಯ ಕಛೇರಿಯಲ್ಲಿ ನಡೆಯಿತು. ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು.

ಇದನ್ನೂ ಓದಿ: 🟠ಬಂದಾರು:(ಜು.24 ) ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ

ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು, ಚರ್ಚಿಸಲಾಯಿತು. ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2025ರ ಜೂನ್‌ ತಿಂಗಳಲ್ಲಿ 25468 ಕುಟುಂಬಗಳಿಗೆ 1,34,67,129/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2025ರ ಜೂನ್‌ ತಿಂಗಳಲ್ಲಿ 44296 ಕುಟುಂಬಗಳಿಗೆ 2,61,61,458/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 118,14,75,244/- ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ ಪ್ರಕೃತ 56355 ಫಲಾನುಭವಿಗಳಿದ್ದು, ಆಗಸ್ಟ್-2023‌ ರಿಂದ ಈವರೆಗೆ 218,36,64,000/-ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.

ಅನ್ನ ಭಾಗ್ಯ ಯೋಜನೆಯಡಿ ಜುಲೈ ತಿಂಗಳಲ್ಲಿ 49303 ಪಡಿತರ ಚೀಟಿದಾರರಿಗೆ 9922 ಕ್ವಿಂಟಾಲ್‌ ಅಕ್ಕಿಯನ್ನು ವಿತರಿಸಲಾಗಿದೆ. ಪ್ರತೀ ಕೆ.ಜಿ.ಗೆ ರೂಪಾಯಿ 34.00 ರಂತೆ  55,49,55,540.00ರೂಗಳ ಅನುದಾನವು ಆಗಸ್ಟ್-2023‌ ರಿಂದ ಈವರೆಗೆ ತಾಲೂಕಿನ ಪಡಿತರ ಚೀಟಿದಾರರಿಗೆ ದೊರೆತಿರುವುದಾಗಿ ಅಧಿಕಾರಿಗಳು ಸಭೆಗೆ ವಿವರ ನೀಡಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 6072 ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 815 ಅಭ್ಯರ್ಥಿಗಳಿಗೆ 2025ರ ಮೇ ತಿಂಗಳಲ್ಲಿ 22,81,500.00ರೂ.ಗಳನ್ನು ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು, ಆಗಸ್ಟ್-2023‌ ರಿಂದ 2025ರ ಮೇ ತಿಂಗಳವರೆಗೆ 1,65,40,500.00 ರೂ.ಗಳನ್ನು ಸರ್ಕಾರವು ಫಲಾನುಭವಿಗಳ ಖಾತೆಗೆ ಜಮಾ ಮಾಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.

ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2025ರ ಜೂನ್ ತಿಂಗಳಲ್ಲಿ 600449 ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023‌ ರಿಂದ ಈವರೆಗೆ 15531595 ಪ್ರಯಾಣಿಕರು ಪ್ರಯಾಣಿಸಿದ್ದು, 71,24,70,465/-ರೂ. ಬಿಡುಗಡೆಯಾಗಿರುವುದಾಗಿ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರು, ಇಲಾಖಾಧಿಕಾರಿಗಳು, ತಾಲೂಕು ಪಂಚಾಯತ್‌ ಅಧೀಕ್ಷಕರಾದ ಡಿ.ಪ್ರಶಾಂತ್‌  ಮತ್ತು ನೋಡೆಲ್‌ ಅಧಿಕಾರಿಯಾದ ಹೆರಾಲ್ಡ್‌ ಸ್ವಿಕ್ವೇರಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *