ಉಜಿರೆ:(ಜು.24) ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜು.17ರಂದು ನಡೆಯಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಎಸ್.ಎನ್. ಕಾಕತ್ಕರ್, “ಶಿಕ್ಷಣ ಎನ್ನುವುದು ಕೇವಲ ವಿದ್ಯಾಭ್ಯಾಸವಲ್ಲ ಅದು ವಿದ್ಯಾರ್ಥಿಗಳ ನಡತೆಯಾಗಿದೆ. ವಿದ್ಯಾರ್ಥಿ ದೆಸೆಯಲ್ಲಿ ಕಲಿಯಲು ಸಾಕಷ್ಟಿದೆ” ಎಂದರು.
ಕಾಲೇಜಿನ ಆರಂಭದಿಂದ ನಡೆಸಿಕೊಂಡು ಬಂದ ಶಿಸ್ತು, ವ್ಯವಸ್ಥೆ ಮತ್ತು ಶಿಕ್ಷಣವನ್ನು ರಾಜ್ಯಶಾಸ್ತ್ರ ವಿಭಾಗ ಎತ್ತಿ ಹಿಡಿದಿದೆ. ವಿದ್ಯಾರ್ಥಿಗಳಲ್ಲಿ ಮಾತುಗಾರಿಕೆ, ಸಮೂಹ ಮನೋಭಾವನೆ ಮತ್ತು ಹಲವಾರು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳುವುದಕ್ಕೆ ಪೂರಕವಾದ ಚಟುವಟಿಕೆಗಳನ್ನು ಆಯೋಜಿಸುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಾ ನಿಕಾಯದ ಡೀನ್ ಡಾ. ಭಾಸ್ಕರ ಹೆಗಡೆ ಭಿತ್ತಿಪತ್ರಿಕೆ ಅನಾವರಣಗೊಳಿಸಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ನಟರಾಜ್ ಎಚ್.ಕೆ., ಉಪನ್ಯಾಸಕರಾದ ಭಾಗ್ಯಶ್ರೀ ಮತ್ತು ಶಿವಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತರಗತಿ ಸಂಯೋಜಕಿ ಅಚಲ ಸ್ವಾಗತಿಸಿ, ಮಾನವ್ ನಾಯ್ಡು ವಂದಿಸಿದರು. ಮಾನ್ಯ ಕಾರ್ಯಕ್ರಮ ನಿರೂಪಿಸಿದರು.
