Fri. Jul 25th, 2025

ಮಡಿಕೇರಿ :(ಜು.24) ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್‌ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: 🟣ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ

ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32) ಸಾವನ್ನಪ್ಪಿರುವ ಶಿಕ್ಷಕಿ.

ಮೃತರ ಕುಟುಂಬಸ್ಥರ ಆರೋಪದ ಹಿನ್ನೆಲೆ ಇದೊಂದು ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲಾಗಿದೆ.

ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸಫ್ರೀನಾ ಅವರನ್ನು ಪತಿ ನಜೀರ್‌ ನಾಪೋಕ್ಲುವಿನ ಆಸ್ಪತ್ರೆಗೆ ಕರೆತಂದರಾದರೂ ಅಷ್ಟೊತ್ತಿಗಾಗಲೇ ಸಫ್ರೀನಾ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ತರಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಕಲಹ ನಡೆಯುತ್ತಿತ್ತು ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನಾಪೋಕ್ಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *