ಉಜಿರೆ:(ಜು.೨೪) ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಜಿರೆ ಇದರ 19ನೇ ವರ್ಷದ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂರ್ವಭಾವಿ ಸಭೆಯು ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆಯಿತು.

ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು ಬಿಡುಗಡೆಗೊಳಿಸಿದರು.



