ಕನ್ಯಾಡಿ: (ಜು.25) ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಶ್ರೀ , ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಜುಲೈ 24 ರಂದು ಭೇಟಿ ಮಾಡಲಾಯಿತು.

ಇದನ್ನೂ ಓದಿ: ⭕ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದು ಯುವಕ ಸಾವು
ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಅವರಿಗೆ ವಿವರಿಸಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕಾಗಿ ತಮ್ಮ ಬ್ಯಾಂಕ್ ನ CSR ನ ಮೂಲಕ ಸಹಕರಿಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಮತ್ತು ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ, ಅನುಸರಣೆ ಮತ್ತು ಹಣಕಾಸು ವ್ಯವಸ್ಥಾಪಕ ಶ್ರೀ ಮೋಹನ ಎಸ್ ಉಪಸ್ಥಿತರಿದ್ದರು.


