Sat. Jul 26th, 2025

Rani Chennabhairadevi: ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಅನಾವರಣಗೊಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು (ಜು.25): “ಮೆಣಸಿನ ರಾಣಿ” ಎಂದೇ ಪ್ರಸಿದ್ಧಳಾದ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಂಚೆ ಚೀಟಿ ಬಿಡುಗಡೆ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮತ್ತು ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ⭕ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕ ಕುಮಾರಧಾರಾ ನದಿಯಲ್ಲಿ ಶವವಾಗಿ ಪತ್ತೆ

ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ ಬಳಿಕ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಣಿ ಚೆನ್ನಭೈರಾದೇವಿಯ ಧೈರ್ಯ, ಸ್ಥೈರ್ಯ ಮತ್ತು ಸಾಧನೆಯನ್ನು ನಾವು ಸುವರ್ಣಾಕ್ಷರಗಳಲ್ಲಿ ಮಾತ್ರವಲ್ಲ, ವಜ್ರದ ಅಕ್ಷರಗಳಲ್ಲಿ ಕೆತ್ತಬೇಕು. ಇದೊಂದು ಅವಿಸ್ಮರಣೀಯ ಘಟನೆ. ನಿಜವೇ ಎಂದು ಮೈ ಚಿವುಟಿ ನೋಡಿಕೊಳ್ಳಬೇಕಾದ ಸಂಗತಿ. ಏಕೆಂದರೆ ನನ್ನಂಥವರಿಗೆ ರಾಷ್ಟ್ರಪತಿ ಭವನವನ್ನು ಪ್ರವೇಶಿಸುವ ಅವಕಾಶವೇ ದೊಡ್ಡದು. ಇನ್ನು ಅವರನ್ನು ಸಮೀಪದಲ್ಲಿ ಕಾಣುವ ಭಾಗ್ಯ ಮತ್ತಷ್ಟು ಹಿರಿದಾದುದು ಎಂದಿದ್ದಾರೆ.

ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಇತಿಹಾಸದ ಗರ್ಭದಲ್ಲಿ ಅಡಗಿಹೋದ ಚೆನ್ನಭೈರಾದೇವಿಯಂತಹ ವ್ಯಕ್ತಿತ್ವಕ್ಕೆ ನ್ಯಾಯ ಸಂದಾಯವಾಗುತ್ತಿರುವ ಈ ಸಂದರ್ಭದಲ್ಲಿ ಆಕೆಯ ಸಾಧನೆಯನ್ನು ಸ್ಮರಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಹೇಳಿದರು.

Leave a Reply

Your email address will not be published. Required fields are marked *