ಸಂಪಾಜೆ:(ಜು.25) ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕೊಯನಾಡಿನಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ⭕ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕ ಕುಮಾರಧಾರಾ ನದಿಯಲ್ಲಿ ಶವವಾಗಿ ಪತ್ತೆ
ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಈ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪಲಿನಲ್ಲಿದ್ದು ಎನ್ನಲಾಗಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ ಮೂವರು ಯುವಕರನ್ನು ಗುರುತಿಸಲಾಗಿದೆ. ಮತ್ತೋರ್ವ ಮೃತ ಯುವಕನ ಬಗ್ಗೆ ಮಾಹಿತಿ ಇನಷ್ಟೇ ಗೊತ್ತಾಗಬೇಕಿದೆ.


