Mon. Jul 28th, 2025

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

ಬೆಳ್ತಂಗಡಿ :(ಜು.28) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕು ಇದರ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ತಾಲೂಕು ಅಧ್ಯಕ್ಷ ಕಾಸಿಂ ಮಲ್ಲಿಗೆಮನೆ ರವರ ಅಧ್ಯಕ್ಷತೆಯಲ್ಲಿ ಜು.28 ರಂದು ನಡೆಯಿತು.

ಇದನ್ನೂ ಓದಿ: 🔴ಕಳೆಂಜ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ

ಸಭೆಯನ್ನು ಸ್ಥಾಪಕ ಅಧ್ಯಕ್ಷ ವಸಂತ್ ಸಾಲಿಯಾನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ಸದ್ರಿ ಸಭೆಯಲ್ಲಿ, ತೀವ್ರ ಖಂಡನೆ ವ್ಯಕ್ತಪಡಿಸಲಾಯಿತು.ಅನಾಮಧೇಯ ವ್ಯಕ್ತಿ ಮತ್ತು ಪೊಲೀಸ್ ಇಲಾಖೆಗೆ ಸಂಬಂಧಿಸಿದ ತನಿಖಾ ವಿಚಾರಗಳನ್ನು ಮುಂದಿಟ್ಟು ಕ್ಷೇತ್ರಕ್ಕೆ ಹಾಗೂ ಧರ್ಮಾಧಿಕಾರಿಗಳಿಗೆ ಮತ್ತು ಅವರ ಕುಟುಂಬ ವರ್ಗದವರನ್ನು ನವ ಮಾಧ್ಯಮಗಳಲ್ಲಿ ನಿಂದಿಸುವ ಹಾಗೂ ಕ್ಷೇತ್ರಕ್ಕೆ ಅಪಚಾರವೆಸಗುವ ಅಪಪ್ರಚಾರಗಳನ್ನು ಪದೇ ಪದೇ ಗೈಯ್ಯುತ್ತಿರುವ ವಿಚಾರವನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಖಾವಂದರ ಜನಪರವಾದ ಎಲ್ಲಾ ಕಾರ್ಯ ಯೋಜನೆಗಳ ಬಗ್ಗೆ ಅದಕ್ಕೆ ಧಕ್ಕೆಯಾಗದಂತೆ ಜನ ಜಾಗೃತಿ ವೇದಿಕೆ ಜೊತೆ ನಿಲ್ಲುವುದೆಂದೂ ತಮ್ಮ ಸ್ಪಷ್ಟ ನಿಲುವು ಮತ್ತೊಮ್ಮೆ ಪ್ರಕಟಿಸಲಾಯಿತು.

ಸಭೆಯಲ್ಲಿ ವರದಿ ಸಾಧನಾ ವಿವರವನ್ನು ಮಂಡಿಸಲಾಯಿತು. ಆ ಬಳಿಕ 2025- 26ನೇ ಸಾಲಿನ ಕ್ರಿಯಾಯೋಜನೆಯ ಅನುಷ್ಠಾನದ ಕುರಿತು ಚರ್ಚಿಸಲಾಯಿತು. ಜಿಲ್ಲಾಧಿಕಾರಿಗಳ ಸೂಚನೆಯಂತೆ ಪ್ರತಿಯೊಂದು ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ವಿರೋಧಿ ಸಮಿತಿಯನ್ನು ರಚನೆ ಮಾಡಿ ಜಾಗೃತಿ ಮೂಡಿಸುವ ಕಾರ್ಯ ಸ್ವಾಗತಾರ್ಹ ಎಂದು ಅಭಿಪ್ರಾಯಕ್ಕೆ ಬರಲಾಯಿತು. ಆ ನಿಟ್ಟಿನಲ್ಲಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 30 ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ದುಶ್ಚಟದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ವಿಶ್ವ ತಂಬಾಕು ವಿರೋಧಿ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಸಮರ್ಪಕವಾಗಿ ಆಚರಿಸಿರುವ ಬಗ್ಗೆ ಸಭೆಯ ಗಮನಕ್ಕೆ ತರಲಾಯಿತು. ಅನಧಿಕೃತ ಮಧ್ಯ ಮಾರಾಟ ಹಾಗೂ ಕೋಳಿ ಅಂಕದ ಬಗ್ಗೆ ಕ್ರಮ ಕೈಗೊಳ್ಳುವಂತೆ ನಿರ್ಣಯಿಸಲಾಯಿತು. ವರ್ಷಾಂತ್ಯದಲ್ಲಿ ಗುರುವಾಯನಕೆರೆ ಕಚೇರಿ ವ್ಯಾಪ್ತಿಯ ಪ್ರದೇಶದಲ್ಲಿ ಮದ್ಯವರ್ಜನ ಶಿಬಿರ ನಡೆಸುವುದರ ಬಗ್ಗೆಯೂ ಹಾಗೂ ನವ ಜೀವನ ಸಮಿತಿ ಸದಸ್ಯರ ಅನು ಪಾಲನೆಯ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಜನ ಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ವೆಂಕಟರಾಯ ಅಡೂರ್, ಡಿ.ಎ ರಹಿಮಾನ್, ತಿಮ್ಮಪ್ಪ ಗೌಡ ಬೆಲಾಳು, ಎಲ್ಲಾ ವಲಯದ ವಲಯ ಅಧ್ಯಕ್ಷರು ಹಾಗೂ ಜನಜಾಗೃತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾ.ಯೋ. ನೂತನ ಜಿಲ್ಲಾ ನಿರ್ದೇಶಕ ದಿನೇಶ್ ತಮ್ಮ ಪರಿಚಯ ಮಾಡಿಕೊಂಡು ಸಭೆಯಲ್ಲಿ ಮಾತನಾಡಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಿಸ್ ವಿಚಾರ ಮಂಡಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಅಚಾರ್ಯ ಕ್ರಿಯಾ ಯೋಜನೆ ಮಂಡಿಸಿದರು. ಬೆಳ್ತಂಗಡಿ ಯೋಜನಾಧಿಕಾರಿ ಯಶೋಧರ ಕೆ ಸ್ವಾಗತಿಸಿದರು. ತಾ.ಸದಸ್ಯೆ ಮಂಜುಳಾ ಕಾರಂತ ಪ್ರಾರ್ಥನೆ ಹಾಡಿದರು. ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್ ಧನ್ಯವಾದವಿತ್ತರು.

ಅನಾಮಿಕ ವ್ಯಕ್ತಿ ಧರ್ಮಸ್ಥಳದ ಆಸು ಪಾಸು ಅನಧಿಕೃತವಾಗಿ ಶವಗಳನ್ನು ಹೂಳಲಾಗಿದೆ ಎನ್ನುವ ವಿಚಾರದಂತೆ ರಾಜ್ಯ ಸರಕಾರ ಈ ಪ್ರಕರಣವನ್ನು ಎಸ್ಐಟಿ ತಂಡ ರಚಿಸಿ ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ ಎಂದ ತಾಲೂಕು ಜನಜಾಗೃತಿ ವೇದಿಕೆ ಸ್ವಾಗತಿಸಿತು.

Leave a Reply

Your email address will not be published. Required fields are marked *