ಬೆಳ್ತಂಗಡಿ:(ಜು.28) ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ಇವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶಿಸಿದ್ದಾರೆ.

ಇದನ್ನೂ ಓದಿ: ⭕ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು
ನೇಮಕಾತಿಗೆ ಶಿಫಾರಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂರವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭಾ ನಾರಾಯಣಗೌಡ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕೀಮ್ ಕೊಕ್ಕಡ, ತಾಲೂಕು ಕೆಡಿಪಿ ಸದಸ್ಯರಾದ ಸುಮತಿ ಶೆಟ್ಟಿ ಕಣಿಯೂರು, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅರುಣ್ ಲೋಬೊ, ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ವಿಜಯಲಕ್ಷ್ಮಿ ನಿಡ್ಲೆ ಉಪಸ್ಥಿತರಿದ್ದರು.

