ಕಡಬ:(ಜು.29) ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ.

ಇದನ್ನೂ ಓದಿ: ⭕ಪುತ್ತೂರು: ನೇಣುಬಿಗಿದುಕೊಂಡು ಕಲ್ಲೇಗ ನಿವಾಸಿ ವಿಶ್ವಾಸ್ ಆತ್ಮಹತ್ಯೆ
ಶ್ವೇತಾ(23ವ) ಮೃತ ಯುವತಿ.
ಕಡಬ ತಾಲೂಕಿನ ಕುಂತೂರು ಗ್ರಾಮದ ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ಎಂಬವರ ಪುತ್ರಿ ಎಂದು ಗುರುತಿಸಲಾಗಿದೆ. ಪದವೀಧರೆಯಾಗಿದ್ದ ಈಕೆ ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು. ಆರಂಭದಲ್ಲಿ ಜ್ವರ ಕಾಣಿಸಿಕೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಬಳಿಕ ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಕಿಡ್ನಿ ಸಂಬಂಧಿತ ಖಾಯಿಲೆ ವಾಸಿಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಲಂಕಾರಿನ ಖಾಸಗಿ ಕ್ಲಿನಿಕ್‌ಗೆ ಕರೆದುಕೊಂಡು ಬಂದು, ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎಂದು ತಿಳಿದು ಬಂದಿದೆ.

