Fri. Aug 1st, 2025

Belthangady: ಕೆಂಪು ಕಲ್ಲು & ಮರಳಿನ ಸಮಸ್ಯೆಗೆ ಅತೀ ಶೀಘ್ರದಲ್ಲಿ ಅಂತ್ಯ ಹಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ

ಬೆಳ್ತಂಗಡಿ: (ಜು.31) ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ ಕೆಂಪು ಕಲ್ಲು ಹಾಗೂ ಮರಳಿನ ಸಮಸ್ಯೆಗೆ ಅತೀ ಶೀಘ್ರದಲ್ಲಿ ಅಂತ್ಯ ಹಾಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಶಾಸಕ ಮಿತ್ರರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಮುಖ್ಯ ಮಂತ್ರಿ ಗಳನ್ನು ಭೇಟಿಯಾಗಿ ಮನವಿ ಮಾಡಲಾಯಿತು.

ಇದನ್ನೂ ಓದಿ: ⭕ಚಿಕ್ಕಮಗಳೂರು: ತಾಯಿಯನ್ನು ಬೆಂಕಿ ಹಚ್ಚಿ ಕೊಂದು ಶವದ ಪಕ್ಕವೇ ಮಲಗಿದ್ದ ಪಾಪಿ ಮಗ.!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಡಾ ಭರತ್ ಶೆಟ್ಟಿ, ರಾಜೇಶ್ ನಾಯಕ್, ಭಾಗಿರಥಿ ಮುರುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕರಾದ ವಸಂತ ಪೂಜಾರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *