Sat. Aug 2nd, 2025

ಉಜಿರೆ: ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

ಉಜಿರೆ:(ಆ.2) ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2023 ಹಾಗೂ 24 ರ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು , ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಹದಿನೇಳು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಇದನ್ನೂ ಓದಿ: ♟ಬೆಳ್ತಂಗಡಿ: ತಾಲೂಕು ಮಟ್ಟದ ಚೆಸ್ ಪಂದ್ಯಾವಳಿ

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವು ಅವರ ಬ್ಯಾಂಕ್ ಖಾತೆಗಳಿಗೆ ಬಂದಿದ್ದು, ಒಟ್ಟು ಒಂದು ಲಕ್ಷದ ಎರಡು ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *