ತಣ್ಣೀರುಪಂತ :(ಆ.03) ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಾಳೆ ಸೋಮವಾರ ಆಗಸ್ಟ್ 04 ರಂದು ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ತಣ್ಣೀರುಪಂತ ಸಿ ಎ ಬ್ಯಾಂಕ್ ಕನಸು ಸಭಾಭವನದಲ್ಲಿ ಜರುಗಲಿದೆ.

ಇದನ್ನೂ ಓದಿ: 🟠ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ
ಈ ಸಮಾರಂಭಕ್ಕೆ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೋಟ್ಯಾಡಿ ಪುತ್ತೂರು,ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಪ್ರಜ್ವಲ್,


ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿ ಪ್ರವೀಣ್ ರೈ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಚುನಾವಣಾ ಪ್ರಭಾರಿ ಪ್ರವೀಣ್ ರೈ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್ ಹಾಗೂ ಇನ್ನುಳಿದ ಅನೇಕ ಗಣ್ಯರು, ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
