ಪುತ್ತೂರು:(ಆ.5) ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಕಟ್ಟಿ ಹಾಕಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: 🔴ಪುತ್ತೂರು:(ಆ.23) ದಕ್ಷಿಣ ಭಾರತದ ಏಕೈಕ ಬಿಸಿ ನೀರಿನ ತೀರ್ಥ
ವ್ಯಕ್ತಿ ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈಶ್ವರಮಂಗಲ ಹೊರ ಠಾಣೆ ಪೊಲೀಸರು ಬಂದು ಆತನನ್ನು ವಶಕ್ಕೆ ಪಡೆದುಕೊಂಡು, ಸಂಪ್ಯ ಠಾಣೆಗೆ ಕರೆದೊಯ್ದುರು. ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆತ ಕಾಸರಗೋಡಿನ ಮುಳ್ಳೇರಿಯದ ವ್ಯಕ್ತಿ ಎಂದು ತಿಳಿದುಬಂದಿದೆ.

