ಪುತ್ತೂರು:(ಆ.7) ಪುತ್ತೂರಿನ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ⭕ಬೆಂಗಳೂರು: ಬಾಲಕನ ಕಿಡ್ನ್ಯಾಪ್, ಕೊಲೆ ಕೇಸ್
ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಎಂದು ಗುರುತಿಸಲಾಗಿದೆ. ಸದ್ಯ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.

ಸ್ಥಳೀಯರು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದು ಆಕಸ್ಮಿಕವಾಗಿ ಬಿದ್ದು ಮೃತಪ್ಪಟ್ಟಿದ್ದಾರಾ, ಯಾರಾದರೂ ತಳ್ಳಿ ಬಿದ್ದು ಮೃತರಾಗಿದ್ದಾರಾ, ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಮಾಹಿತಿ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.

