ಉಜಿರೆ:(ಆ.9) ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ವೈಯಕ್ತಿಕ ಅಭಿವೃದ್ಧಿ (Institute for Individual Development) ಸಂಸ್ಥೆಯ ನಿರ್ದೇಶಕರಾದ ಪ್ರೊ. ರೊನಾಲ್ಡ್ ಪಿಂಟೋ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ವೃತ್ತಿಪರ ಭವಿಷ್ಯದ ನಿರ್ಧಾರ ಕೈಗೊಳ್ಳುವ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜೆ ಸ್ವಾಗತಿಸಿದರು.

