ಉಜಿರೆ:(ಆ.9) ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ ಮೂಲೆಯಲ್ಲೂ ತುಳುನಾಡಿಗೆ ಸಂಬಂಧಪಟ್ಟಂತ ವಿವಿಧ ಭಕ್ಷ ಭೋಜ್ಯ, ಆಟಿಯಲ್ಲಿ ಆಡುವಂತಹ ವಿಶೇಷ ಆಟಗಳು ರಾರಾಜಿಸಿದವು.

ಇದನ್ನೂ ಓದಿ: 💎ಬೆಳ್ತಂಗಡಿ: ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ
ತುಳುನಾಡಿನ ಕಲೆ, ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರ, ಆಹಾರ, ಆರೋಗ್ಯವನ್ನು ಆಟಿ ದಿನಗಳಲ್ಲಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ತುಳು ನಾಡಿಗೆ ಹಾಗೂ ತುಳು ಭಾಷೆಗೆ ಸಂಬಂಧಪಟ್ಟಂತಹ ಹಾಡು, ಗಾದೆ, ಸಂಧಿ ಪಾಡ್ದನ, ನೃತ್ಯ, ಭಿತ್ತಿ ಪತ್ರಿಕೆ, ಆಟಿ ತಿಂಗಳಿನ ತಿನಿಸುಗಳ ಪ್ರದರ್ಶನವನ್ನು ಹಾಗೂ ದೇಸಿ ಆಟಗಳನ್ನು ಸಹ ಏರ್ಪಡಿಸಲಾಗಿತ್ತು.


ಶಾಲಾ ಪ್ರಾಂಶುಪಾಲರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವಿದ್ಯಾರ್ಥಿಗಳಾದ ಆರ್ಯಮನ್ ಹಾಗೂ ತ್ರಿಜಲ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪೃಥ್ವಿ ವಂದಿಸಿದರು.
