Sat. Aug 16th, 2025

Belthangady: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ & ಗ್ರಾಮೀಣ ಸಮಿತಿಗಳ ವತಿಯಿಂದ “ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ” ಪ್ರತಿಭಟನೆ

ಬೆಳ್ತಂಗಡಿ: ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ , ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ, ಎಂಬ ಘೋಷ ವಾಕ್ಯಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ, ಮಾಡಲಾಯಿತು.

ಇದನ್ನೂ ಓದಿ: 🔴ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಪ್ರತಿಭಟನೆಯನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾತನಾಡಿ 2024ರ ಸಾರ್ವತ್ರಿಕ ಚುನಾವಣೆಗಳಲ್ಲಿ “ಬೃಹತ್​​ ಅಕ್ರಮ” ನಡೆದಿದ್ದು. ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು ವ್ಯವಸ್ಥಿತವಾಗಿ ಈ ಅಕ್ರಮಗಳನ್ನು ನಡೆಸಿದೆ.
ಚುನಾವಣಾ ಆಯೋಗವು ಇನ್ನು ಪ್ರಜಾಪ್ರಭುತ್ವದ ಕಾವಲುಗಾರನಾಗಿ ಉಳಿದಿಲ್ಲ, ಅದು ಕಾರ್ಯಾಂಗದ ಕೈಗೊಂಬೆಯಾಗಿದೆ” ಎಂದರು.

. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಉಷಾ ಅಂಚನ್, ಕಾಂಗ್ರೆಸ್ ಗ್ರಾಮೀಣ ಸೇವಾದಳದ ಅಧ್ಯಕ್ಷರಾದ ಪ್ರದೀಪ್ ಕೆ ಸಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಝರ್ ನಾವುರು,

ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ, ಮೇಳ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಶೋಭಾ ನಾರಾಯಣ ಗೌಡ, ತಾಲೂಕು ಕೆ ಡಿ ಪಿ ಸದಸ್ಯರಾದ ಸುನಿಲ್ ಜೈನ್, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೇರಿಂಜೆ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೀರೇಂದ್ರ ಕುಮಾರ್ ಜೈನ್, ಆರಾಧನಾ ಸಮಿತಿಯ ಸದಸ್ಯರಾದ ಬಾಲಕೃಷ್ಣ ಭಟ್, ಪ್ರಮುಖರಾದ ಹಣ್ಣು ಪರಮಾರು ವಿಜಯ ಗೌಡ ಬೆಳಾಲು, ಶರೀಫ್ ಶಬರಬೈಲ್, ಮಹಮ್ಮದ್ ಹನೀಫ್ ಉಜಿರೆ , ಉಮೈರಾ ಬಾನು, ಕುಶಲಪ್ಪ ಗೌಡ ಶಿರ್ಲಾಲು, ಶ್ರೀಮತಿ ಡಯಾನಾ ಪುದುವೆಟ್ಟು, ಸಂತೋಷ್ ಕೆ.ಸಿ ಪುದುವೆಟ್ಟು, ಕುಶಲಪ್ಪ ಗೌಡ ಕಳೆಂಜ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *