ಉಜಿರೆ : “ನಮ್ಮ ದೇಶದ ಬಗ್ಗೆ ಹೆಮ್ಮೆ ಇರಬೇಕು. ನಮ್ಮ ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಅಗ್ರಿಲೀಫ್ ಪ್ರೈವೇಟ್ ಲಿಮಿಟೆಡ್ ನ ಸಿಬ್ಬಂದಿ ಮುಖ್ಯಸ್ಥರಾದ ಶ್ರೀಮತಿ ಪೃಥ್ವಿ ಕಾರಿಂಜೆ ಇವರು ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ದೇಶಭಕ್ತಿ ಗೀತೆ ಆಯೋಜಿಸಲಾಗಿತ್ತು.
ಶಾಲಾ ಪ್ರಾಂಶುಪಾಲರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳಾದ ದೀಪಿಕಾ ಹಾಗೂ ಶ್ರೇಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಆಶುತೋಷ್.ಎಮ್ ರಾವ್ ವಂದಿಸಿದರು.

