Tue. Aug 19th, 2025

ಬೆಳ್ತಂಗಡಿ: ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲೆಗಳ ಕರಾಟೆ ಪಂದ್ಯಾಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಬೆಳಾಲಿನಲ್ಲಿ ಇಂದು ಏರ್ಪಡಿಸಲಾಗಿತ್ತು.

ಇದನ್ನೂ ಓದಿ: 🔴ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ

ಈ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಯಶಸ್ವಿ ಪ್ರೌಢಶಾಲಾ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿನೀತ್ ಪ್ರೌಢಶಾಲಾ ವಿಭಾಗದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

Leave a Reply

Your email address will not be published. Required fields are marked *