ಬೆಳ್ತಂಗಡಿ: (ಆ.21 )ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಉಡುಪಿ ಜಿಲ್ಲಾ ಅಡಿಷನಲ್ ಎಸ್ಪಿ ಸುಧಾಕರ್ ಹೆಗ್ಡೆ ನೇತೃತ್ವದಲ್ಲಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: 🔴ಸಹಕಾರಿ ಮನೋಭಾವದ ದೈಹಿಕ ಶಿಕ್ಷಕ, ಕಲಾವಿದ ಎಸ್. ಬಿ ನರೇಂದ್ರ ಕುಮಾರ್ ಅವರಿಗೆ ಪದ ನಮನ
ಆ.16 ರಂದು ಫೇಸ್ ಬುಕ್ ಪೇಜ್ ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂದೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿರುವ ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜೆಪಿಯ ಮಂದಾಳತ್ವದಲ್ಲಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆ ವಶಕ್ಕೆ ಪಡೆದು ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ.



