Fri. Aug 22nd, 2025

ಬೆಳ್ತಂಗಡಿ: ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: (ಆ.22) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕರಾಟೆ ಪಂದ್ಯಾಟ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಏರ್ಪಡಿಸಲಾಗಿತ್ತು.

ಈ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಹಮ್ಮದ್ ಅಪ್ಣಾನ್ ತೃತೀಯ ಸ್ಥಾನ ಪಡೆದಿದ್ದಾರೆ.

Leave a Reply

Your email address will not be published. Required fields are marked *