Fri. Aug 22nd, 2025

Ujire: ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

ಉಜಿರೆ:(ಆ.22)ಮೂಡುಬಿದ್ರೆಯ ಎಕ್ಸೆಲೆಂಟ್ ಪ.ಪೂ ಕಾಲೇಜಿನಲ್ಲಿ ನಡೆದ ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ✡ಧರ್ಮಸ್ಥಳ: ಧರ್ಮಸಂರಕ್ಷಣೆ ಗಾಗಿ ಧರ್ಮಸ್ಥಳದಲ್ಲಿ ಮಹರ್ಷಿ ಆನಂದ ಗುರೂಜಿಯವರಿಂದ ಯಾಗ

ಗೌರವಾಧ್ಯಕ್ಷರಾಗಿ ಮಂಗಳೂರು ಶ್ರೀ ಶಾರದಾ ಪ.ಪೂ ಕಾಲೇಜಿನ ಉಪನ್ಯಾಸಕ ರಮೇಶ್ ಆಚಾರ್ಯ, ಉಪಾಧ್ಯಕ್ಷರಾಗಿ ಮಂಗಳೂರು ಎಕ್ಸಪರ್ಟ್ ಪ.ಪೂ ಕಾಲೇಜಿನ ಶ್ರೀನಿವಾಸ ಮಧ್ಯಸ್ಥ , ಮೂಡುಬಿದ್ರೆ ಆಳ್ವಾಸ್ ಪ.ಪೂ ಕಾಲೇಜಿನ ಅಂಬರೀಷ ಚಿಪ್ಲೂಣಕರ್ , ಸುರತ್ಕಲ್ ಗೋವಿಂದದಾಸ ಪ.ಪೂ ಕಾಲೇಜಿನ ಪೈಕ ವೆಂಕಟರಮಣ ಭಟ್ ಇವರು ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರು ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜಿನ ಡಾ. ಸುರೇಖಾ ತಂತ್ರಿ , ಜೊತೆ ಕಾರ್ಯದರ್ಶಿಗಳಾಗಿ ಮಂಗಳೂರು ಮ್ಯಾಪ್ಸ್ ಪ.ಪೂ ಕಾಲೇಜಿನ ಶೈಲಜಾ ಹೆಚ್. ಎಸ್. , ಮೂಡುಬಿದ್ರೆ ಆಳ್ವಾಸ್ ಪ.ಪೂ ಕಾಲೇಜಿನ ಅನಂತ ಭಟ್ , ಕಲ್ಲಡ್ಕದ ಶ್ರೀರಾಮ ಪ.ಪೂ ಕಾಲೇಜಿನ ಮಹೇಂದ್ರ ಭಟ್, ಸಂಘಟನಾ ಕಾರ್ಯದರ್ಶಿಯಾಗಿ ಮೂಡುಬಿದ್ರೆಯ ಎಕ್ಸಲೆಂಟ್ ಪ.ಪೂ ಕಾಲೇಜಿನ ತೇಜಸ್ವಿ ಭಟ್ ಇವರು ಆಯ್ಕೆಯಾಗಿದ್ದಾರೆ.

ಖಜಾಂಚಿಯಾಗಿ ಮಂಗಳೂರಿನ ಡಾ. ಎನ್.ಎಸ್.ಎ.ಎಂ ಪ.ಪೂ ಕಾಲೇಜಿನ ರವಿಶಂಕರ ಹೆಗಡೆ , ರಾಜ್ಯಮಟ್ಟದ ಸಂಘಕ್ಕೆ ಜಿಲ್ಲಾ ಸಂವಹನ ಪ್ರತಿನಿಧಿಯಾಗಿ ಪುತ್ತೂರಿನ ಸರಕಾರಿ ಪ.ಪೂ ಕಾಲೇಜಿನ ಪ್ರಕಾಶ್ ವಿ.ಕೆ ಆಯ್ಕೆಯಾಗಿದ್ದಾರೆ.

ಸಲಹಾ ಸಮಿತಿಯ ಸದಸ್ಯರಾಗಿ ಮಂಗಳೂರು ಬೆಸೆಂಟ್ ಪ.ಪೂ ಕಾಲೇಜಿನ ಅಜಿತಾ , ಮಂಗಳೂರು ಕೆನರಾ ಪ.ಪೂ ಕಾಲೇಜಿನ ಡಾ. ಮಧುಕೇಶ್ವರ ಶಾಸ್ತ್ರಿ , ಮೂಡಬಿದ್ರೆ ಜೈನ್ ಪ.ಪೂ ಕಾಲೇಜಿನ ರಾಮಚಂದ್ರ ಭಟ್ , ಅಳಿಕೆ ಸತ್ಯಸಾಯಿ ಲೋಕಸೇವಾ ಪ.ಪೂ ಕಾಲೇಜಿನ ವೆಂಕಟಕೃಷ್ಣ ಶರ್ಮಾ ಇವರು ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *