ಉಜಿರೆ: (ಆ.22) ಮಂಗಳೂರು ಡಾ.ಎಮ್ ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ.22 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,

(ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿ ತೃಷ ತೃತೀಯ ಸ್ಥಾನ, ಮತ್ತು 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿನಿ ನಿಶಾ ದ್ವಿತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.



ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.
