ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ಕಬ್ಸ್ ಬುಲ್ ಬುಲ್, ಸ್ಕೌಟ್ ಗೈಡ್, ರೋವರ್ ರೇಂಜರ್ಸ್ ವಿದ್ಯಾರ್ಥಿಗಳ ಗೀತ ಗಾಯನವೂ ವಾಣಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಇದನ್ನೂ ಓದಿ: 🔴ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಕಾರ್ಯಕ್ರಮದ ಉದ್ಘಾಟಕರಾಗಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಆಗಮಿಸಿ ಮಕ್ಕಳಿಗೆ ಶುಭವನ್ನು ಹಾರೈಸಿದರು. ವೇದಿಕೆಯಲ್ಲಿ ಪ್ರಾರ್ಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಹಾಸಿನಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ಪೂಜಾರಿ ಉಪಸ್ಥಿತರಿದ್ದರು.



ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಸಂಘಟಿಸಿದ ಕಾರ್ಯಕ್ರಮದಲ್ಲಿ ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಿದ್ದರು ಕೋಶಾಧಿಕಾರಿ ಬೆಳಿಯಪ್ಪ ಕೆ ನಿರೂಪಿಸಿ ಧನ್ಯವಾದವಿತ್ತರು.
