ಮಾಲಾಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 25 ರಂದು ನಡೆದ ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಾಲಾಡಿ ಕೊಲ್ಪೆದಬೈಲು ಎಸ್.ಕೆ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಶ್ರೀ ಲಿಂಗಪ್ಪ ಟೈಲರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಇದನ್ನೂ ಓದಿ: 🟠ಉಜಿರೆ: ಗೋವು ಉಳಿದರೆ ನಾವು ಅಭಿಯಾನ 202೫ ಚಾಲನೆ
ಪಕ್ಷದ ಹಿರಿಯ ಕಾರ್ಯಕರ್ತರಾದ ಶ್ರೀ ಪದ್ಮನಾಭ ಶೆಟ್ಟಿ ಅರ್ಕಜೆ ಉದ್ಘಾಟನಾ ಭಾಷಣ ಮಾಡಿ, ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಹಿರಿಯ ಕಾರ್ಯಕರ್ತರು ನಿರ್ವಹಿಸಿದ ಪಾತ್ರದ ಬಗ್ಗೆ ತಿಳಿಸಿದರು . ಶಾಸಕರಾದ ಶ್ರೀ ಹರೀಶ್ ಪೂಂಜಾ ರವರು ಮಾತನಾಡಿ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು.
ಪ್ರಮುಖರಾದ ಶ್ರೀ ರವಿ ಇಳಂತಿಲ, ತಣ್ಣೀರು ಪಂಥ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಜಯಾನಂದ ಕಲ್ಲಾಪು , ಶಿರ್ಲಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸುಧೀರ್ ಸುವರ್ಣ ಬೈಠಕ್ ನೀಡಿದರು.


ಈ ಸಂದರ್ಭದಲ್ಲಿ ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರ ಕಾಂತಗೌಡ, ಪ್ರಧಾನ ಕಾರ್ಯದರ್ಶಿ ಶ್ರೀ ಪ್ರದೀಪ್ ಶೆಟ್ಟಿ,ಜಿಲ್ಲಾ ಭಾಜಪ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ, ಮಡಂತ್ಯಾರ್ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ, ಸಿ ಎ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಜೋಯಲ್ ಮೆಂಡೋನ್ಸ, ಪಕ್ಷದ ಪ್ರಮುಖ ರಾದ ಶ್ರೀ ನಂದಕುಮಾರ್ ಪಂಚಾಯತ್ ಸದಸ್ಯರು, ಸಿ.ಎ. ಬ್ಯಾಂಕ್ ನಿರ್ದೇಶಕರು, ಹಾಲು ಉತ್ಪಾದಕರ ಸಂಘ ನಿರ್ದೇಶಕರು,ಜನಪ್ರತಿನಿಧಿಗಳು,

ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು, ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.ಶ್ರೀ ದಿನೇಶ್ ಕರ್ಕೇರ ಸ್ವಾಗತಿಸಿ, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ಕಾರ್ಯಕ್ರಮ ನಿರ್ವಹಿಸಿದರು.
