Fri. Aug 29th, 2025

ಮಂಗಳೂರು: ಯಮಸ್ವರೂಪಿಯಾದ ಬಸ್ – ಆರು ಮಂದಿ ಸ್ಪಾಟ್‌ ಡೆತ್

ಮಂಗಳೂರು: ಬಿ.ಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಇದನ್ನೂ ಓದಿ: 🔴ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರುತ್ತಿದೆ ಹೊಸ ಚಲನಚಿತ್ರ ಪೈಕಾ

ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಬಸ್ ಶೆಲ್ಟರ್‌ಗೆ ಢಿಕ್ಕಿ ಹೊಡೆದಿದೆ.

ಮೃತರನ್ನು ರಿಕ್ಷಾ ಚಾಲಕ ಹೈದರ್‌ (47), ಅವ್ವಮ್ಮ(72), ಖದೀಜಾ (60), ಹಸ್ನಾ (11), ನಫೀಸಾ (52), ಆಯಿಷಾ ಫಿದಾ (19) ಮೃತಪಟ್ಟಿದ್ದು, ಲಕ್ಷ್ಮಿ(61), ಸುರೇಂದ್ರ (39) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶೆಲ್ಟರ್ ಹತ್ತಿರ ನಿಲ್ಲಿಸಿದ್ದ ಆಟೋ ರಿಕ್ಷಾದಲ್ಲಿದ್ದವರೂ ಸಹ ಅಪಘಾತಕ್ಕೆ ಒಳಗಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡ ಏಳು ಮಂದಿಯನ್ನು ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಳೆಯಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಖತೀಜ ಅವರು ಇಬ್ಬರು ಮಕ್ಕಳು ಮತ್ತು ಇತರ ಸಂಬಂಧಿಕ ಮಹಿಳೆಯರ ಜೊತೆಗೆ ಆಟೋ ರಿಕ್ಷಾದಲ್ಲಿ ಮಂಜೇಶ್ವರದ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ, ಕಾಸರಗೋಡು ಕಡೆಯಿಂದ ಯಮದೂತನ ರೂಪದಲ್ಲಿ ಬಂದ ಬಸ್‌ ಆಟೋದಲ್ಲಿದ್ದ ಆರು ಮಂದಿಯನ್ನೂ ಆಹುತಿ ಪಡೆದಿದೆ.

ಸ್ಥಳದಲ್ಲಿ ಬಸ್ಸಿಗೆ ಕಾಯುತ್ತಿದ್ದ ಇಬ್ಬರು ಪ್ರಯಾಣಿಕರು ಕೂಡ ಗಂಭೀರ ಗಾಯಗೊಂಡಿದ್ದಾಗಿ ತಿಳಿದುಬಂದಿದೆ. ಬಸ್ ಡಿಕ್ಕಿಯಾಗಿ ಬಳಿಕ ಹಿಂದಕ್ಕೆ ಬಂದಿದ್ದು ತಿರುಗಿ ನಿಂತಿದೆ. ಈ ವೇಳೆ, ಅಲ್ಲಿದ್ದ ಒಬ್ಬರು ಮಹಿಳೆ ಮತ್ತು ಇನ್ನೊಂದು ನಿಲ್ಲಿಸಿದ್ದ ಆಟೋ ಕೂಡ ಜಖಂ ಆಗಿದೆ. ಮೃತರನ್ನು ಮತ್ತು ಗಾಯಗಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ಒಯ್ಯಲಾಗಿದೆ. ಮಧ್ಯಾಹ್ನ 1.45ರ ಸುಮಾರಿಗೆ ಘಟನೆ ನಡೆದಿದ್ದು ಫೈ ಓವರ್‌ ಮತ್ತು ಮೇಲಿನ ತಲಪಾಡಿಯ ಜಂಕ್ಷನ್ ಮಧ್ಯೆ ಅಪಘಾತ ಉಂಟಾಗಿದೆ. ಘಟನೆಯಿಂದ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *