ಕಳೆಂಜ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ.30 ರಂದು ನಡೆದ ಕಳೆಂಜ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಉಮಾಮಹೇಶ್ವರ ದೇವಸ್ಥಾನದ ಶಿವಪಾರ್ವತಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತರಾದ ಕೃಷ್ಣಪ್ಪ ಎಂ.ಕೆ.ನಿಡ್ಡಾಜೆ, ಆನಂದ ಗೌಡ ಮರಕ್ಕಡ, ವಾಸಪ್ಪ ಗೌಡ ನಾಯೆರ್ಮಾರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಿಡ್ಲೆ ಕೃಷಿ ಪತ್ತಿನ ಸೇವಾ ಸಹಕಾರಿ ಬ್ಯಾಂಕ್ ನ ಮಾಜಿ ನಿರ್ದೇಶಕರಾದ ರಮೇಶ್ ರಾವ್ ಕಾಯಡ ಉದ್ಘಾಟನಾ ಭಾಷಣ ಮಾಡಿದರು.
ಕಣಿಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಯುವ ವಕೀಲರಾದ ಯತೀಶ್ ಪಣೆಕ್ಕರ, ಗೋಪಾಲ ಕೃಷ್ಣ ಮಡoತ್ಯಾರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲು, ರವರು ಬೈಠಕ್ ನೀಡಿದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ಸಮಾರೋಪ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.
ಕಳೆoಜ ಬಿಜೆಪಿ ಅಭ್ಯಾಸ ವರ್ಗ ದಲ್ಲಿ ಹಿರಿಯರಾದ ಚೋಮ ಪರಪ್ಪು ಉದ್ಘಾಟನೆಯಲ್ಲಿ ಭಾಗವಹಿಸಿದ್ದರು



ಈ ಸಂದರ್ಭದಲ್ಲಿ ತಾಲ್ಲೂಕು ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ. ಕೆ, ಅಭ್ಯಾಸ ವರ್ಗದ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ,
ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ, ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಹಾರಿತ್ತಕಜೆ, ಕಳೆಂಜ ಪಂಚಾಯತ್ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗು ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
